ಬಹುಪತ್ನಿತ್ವ ಮತ್ತು popular perception

ಬಹುಪತ್ನಿತ್ವ ಎಂದ ಕೂಡಲೇ popular perception ಮುಸ್ಲಿಮರು ಒಂದಕ್ಕಿಂತ ಹೆಚ್ಚು ಮದುವೆ ಯಾಗುವವರು ಎಂದು. ಈ ತಪ್ಪು ತಿಳಿವಳಿಕೆಗೆ ಜನರ ತಿಳಿಗೇಡಿತನಕ್ಕಿಂತ ಮಾಧ್ಯಮಗಳ ಮತ್ತು ಹಗೆ ವರ್ತಕ ರಾಜಕಾರಣಿಗಳ ಕುಚೋದ್ಯದ ಅಪಪ್ರಚಾರ ಕಾರಣ ಎನ್ನಬಹುದು. ಹೌದು ಇಸ್ಲಾಂ ಬಹುಪತ್ನಿತ್ವ ವನ್ನು ಅನುಮತಿಸುತ್ತದೆ ಷರತ್ತುಗಳೊಂದಿಗೆ. ಈ ಶರತ್ತುಗಳೇ ನನ್ನಂಥ ಮತ್ತು ಶೇಕಡಾ 90 ಕ್ಕಿಂತ ಹೆಚ್ಚು ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಹೆಂಡಿರನ್ನು ಹೊಂದಲು ಇಷ್ಟ ಪಡದೆ ಇರುವುದು. ದೇವ ವಾಣಿ “ಪವಿತ್ರ ಕುರ್’ ಆನ್” ನಲ್ಲಿ ವಿಶ್ವಾಸ ಇಡುವ ಮುಸ್ಲಿಮನೊಬ್ಬ ದೇವರು ವಿಧಿಸಿದ ಶರತ್ತುಗಳನ್ನು ಅವಗಣಿಸಿ ತನ್ನ ಶಾರೀರಿಕ ತೃಷೆಗಾಗಿ ಪಾಪವನ್ನು ತನ್ನ ಮೇಲೆ ಹೇರಿಕೊಳ್ಳಲಾರ. ಹಾಗೆಯೇ ಬಹುಪತ್ನಿತ್ವ ಇಸ್ಲಾಮಿನ prerogative ಮಾತ್ರ ಅಲ್ಲ ಎಂದು ಈ ಕುರಿತು ನಡೆದ ಅಧ್ಯಯನಗಳು ಸ್ಥಿರೀಕರಿಸುತ್ತವೆ.

ಹಿಂದೂ ಧರ್ಮೀಯರ ಬೌಧಾಯನ ಧರ್ಮಶಾಸ್ತ್ರದಲ್ಲಿ ಬ್ರಾಹ್ಮಣರು ನಾಲ್ಕು ಹೆಂಡಿರನ್ನೂ, ಕ್ಷತ್ರಿಯ ಮೂರು, ವೈಶ್ಯ ಎರಡು ಮತ್ತು ಶೂದ್ರ ಒಂದು ಹೆಣ್ಣನ್ನು ಮದುವೆಯಾಗಬಹುದು. ಭಗವಾನ್ ಶ್ರೀ ಕೃಷ್ಣನೂ, ಮತ್ತು ಪಾಂಡವರೂ ಬಹುಪತ್ನಿತ್ವವನ್ನು ಆಚರಿಸಿದವರು.      

ಕನ್ನಡದ ಸುಪ್ರಸಿದ್ಧ ವೆಬ್ ತಾಣವೊಂದರಲ್ಲಿ ಒಬ್ಬರು “ಮೈಸೂರು ರಾಜರುಗಳಿಗೆ ಮಕ್ಕಳಿಗಿಂತ ಹೆಂಡತಿಯರೇ ಜಾಸ್ತಿ!” ಶೀರ್ಷಿಕೆಯಡಿ ಮೈಸೂರಿನ ರಾಜ ಮನೆತನ ಬಹುಪತ್ನಿತ್ವವನ್ನು ಆಚರಿಸುತ್ತಿತ್ತು ಎಂದು ಬರೆದಿದ್ದರು. . ಅದರ ತುಣುಕೊಂದನ್ನು ಕೆಳಗೆ ನೀಡಿದ್ದೇನೆ.

ಮೈಸೂರು ಅರಮನೆಯಲ್ಲಿ ಕಂಚಿನ ಚೂರ್ಣಿಕೆಯೊಂದಿದೆ. ಅದರ ೨೨ ಎಲೆಗಳ (ಪಟಗಳ) ಮೇಲೆ ಆರಂಭದ ಆದಿ ಯದುರಾಜನಿಂದ ಹಿಡಿದು ಮುಮ್ಮಡಿ ಕೃಷ್ಣರಾಜನವರೆಗೆ ಇಪ್ಪತ್ತೆರಡು ರಾಜರುಗಳ ಹೆಸರು, ಹುಟ್ಟಿದ ದಿನಾಂಕ, ಪಟ್ಟಕ್ಕೆ ಬಂದ ದಿನಾಂಕ, ಆಡಳಿತಾವಧಿ ಎಲ್ಲವನ್ನೂ ಹೇಳಲಾಗಿದೆ. ಜೊತೆಗೆ ಅವರಿಗಿದ್ದ ಹೆಂಡತಿಯರ ಸಂಖ್ಯೆ ಹಾಗೂ ಮಕ್ಕಳ ಸಂಖ್ಯೆಯನ್ನೂ ದಾಖಲಿಸಲಾಗಿದೆ. ಇಡೀ ಚೂರ್ಣಿಕೆಯ ಬರಹ “ಎಫಿಗ್ರಾಫಿಯಾ ಕರ್ನಾಟಿಕ” ಸಂಪುಟ ೫ ರಲ್ಲಿ ಪ್ರಕಟವಾಗಿದೆ. ಅದರ ಇಂಗ್ಲೀಷ್ ಅನುವಾದವೂ ಅಲ್ಲೇ ಪ್ರಕಟವಾಗಿದೆ.

ಈ ಚೂರ್ಣಿಕೆಯನ್ನು ಸಿದ್ಧ ಪಡಿಸಿದ ಕಲಾವಿದ ತಿಪ್ಪಣ್ಣ ಎನ್ನುವ ವ್ಯಕ್ತಿ.

ಮೈಸೂರು ರಾಜರುಗಳು ಮತ್ತು ಅವರ ಸಂಸಾರ:

ದೊಡ್ಡ ದೇವರಾಜ ವೊಡೆಯರ್ – 53 ಹೆಂಡಿರು 11 ಮಕ್ಕಳು

ಚಿಕ್ಕ ದೇವರಾಜ ವೊಡೆಯರ್ – 22 ಹೆಂಡಿರು, 2 ಮಕ್ಕಳು

ಕಂತೀರವ ಮಹಾರಾಜ ವೊಡೆಯರ್ – 3 ಹೆಂಡಿರು, 5 ಮಕ್ಕಳು

ವಮ್ಮಡಿ ದೊಡ್ಡ ಕೃಷ್ಣ ರಾಜ ವೊಡೆಯರ್ – 45 ಹೆಂಡಿರು, 2 ಮಕ್ಕಳು

ವಮ್ಮಡಿ ಚಾಮರಾಜ ವೊಡೆಯರ್ – 3 ಹೆಂಡಿರು, ಮಕ್ಕಳಿಲ್ಲ

ಇಮ್ಮಡಿ ಕೃಷ್ಣರಾಜ ವೊಡೆಯರ್ – 8 ಹೆಂಡಿರು, 9 ಮಕ್ಕಳು

ಮುಮ್ಮಡಿ ಖಾಸಾ ಚಾಮರಾಜ ವೊಡೆಯರ್ – 10 ಹೆಂಡಿರು ಮತ್ತು 4 ಮಕ್ಕಳು

ಮುಮ್ಮಡಿ ಶ್ರೀ ಕೃಷ್ಣ ರಾಜ ವೊಡೆಯರ್ ಬಹಾದುರ್ – 20 ಹೆಂಡಿರು

ಚಾಮರಾಜ ವೊಡೆಯರ್ – 65 ಹೆಂಡಿರು

ಬೆಟ್ಟ ಚಾಮರಾಜ ವೊಡೆಯರ್ – 13 ಹೆಂಡಿರು, 6 ಮಕ್ಕಳು

ರಾಜ ವೊಡೆಯರ್  – 8 ಹೆಂಡಿರು, 6 ಮಕ್ಕಳು

ಇಮ್ಮಡಿ ರಾಜ ವೊಡೆಯರ್ – 19 ಹೆಂಡಿರು.

ಮೇಲೆ ಹೇಳಿದ ಅರಸರು ವಿವಿಧ ಕಾರಣಗಳಿಗಾಗಿ ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಇಟ್ಟು ಕೊಂಡಿರಬಹುದು ಮತ್ತು ಅವರುಗಳು ಬದುಕಿದ ಕಾಲದಲ್ಲಿ ಹಾಗೆ ಬಹುಪತ್ನೀ ವೃತಸ್ಥರಾಗುವುದು ರೂಢಿಯೂ ಇದ್ದಿರಬೇಕು. ಅರಸರು ಈ ರೀತಿ ಮಾಡಿದಾಗ ಸಮಾಜದ ಪ್ರತಿಷ್ಟಿತ ಗಣ್ಯರೂ ಸಹ 20, 30 ಅಲ್ಲದಿದ್ದರೂ 2, 3 ಪತ್ನಿಯರನ್ನಾದರೂ ಹೊಂದಿರುವ ಸಾಧ್ಯತೆ ಹೆಚ್ಚು ಎಂದೇ ಹೇಳಬಹುದು. ಹಾಗಾಗಿ ಬಹುಪತ್ನಿತ್ವ ಆಗಿನ ಕಾಲದಲ್ಲಿ ubiquitous ಎನ್ನಬಹುದು.  

ಆಫ್ರಿಕಾದ swaziland ದೇಶದ ರಾಜ ಪ್ರತೀ ವರ್ಷವೂ ಸುರ ಸುಂದರ ಕನ್ಯೆಯರ ಮೇಳ ಏರ್ಪಡಿಸಿ ತನಗೆ ಚೆಂದುಳ್ಳಿಯಾಗಿ ಕಂಡ ಚಕೋರಿ ಯನ್ನು ಮದುವೆಯಾಗಿ ತನ್ನ ಚಂದ್ರಮಂಚದ ಸಂಗಾತಿಯರ ಸಾಲಿಗೆ ಸೇರಿ ಕೊಳ್ಳುತ್ತಾನಂತೆ. ಅವನ ಅದೃಷ್ಟಕ್ಕೆ ನಾವು ಹಲುಬಿ ಕರುಬಿ ಫಲವಿಲ್ಲ ಎನ್ನಿ, ಏಕೆಂದರೆ ಇರುವ ಒಬ್ಬ ಹೆಂಡತಿಯ ಆಸೆ, ಅಭಿಲಾಷೆ, ಬೇಕು ಬೇಡಗಳನ್ನು ಪೂರೈಸುವತ್ತ ನಾವು ನಡೆಸುವ ಕುಸ್ತಿ ಕಸರತ್ತೇ ಸಾಕು ಬೇಕಾಗಿರುವಾಗ  ಮತ್ತೊಂದು, ಮಗುದೊಂದು, ಇನ್ನೊಂದು ….ಹೀಗೆ ಹೆಂಡತಿಯರನ್ನು ನಮ್ಮ ಗೋಣಿನ ಸುತ್ತಾ ಪೋಣಿಸುತ್ತಾ ಹೋದರೆ  ಒಂದು ದಿನ ಅದೇ ನಮಗೆ ಉರುಳಾಗಿ ನಮ್ಮ ಅವಸಾನಕ್ಕೆ ಕಾರಣವಾಗಬಹುದು ಎನ್ನುವುದರಲ್ಲಿ ಸಂಶಯ ಬೇಡ, ಏನಂತೀರ?

Advertisements

3 thoughts on “ಬಹುಪತ್ನಿತ್ವ ಮತ್ತು popular perception

 1. Narendra ಹೇಳುತ್ತಾರೆ:

  ಬಹುಪತ್ನಿತ್ವದ ಪದ್ಧತಿ ಹಿಂದೆ ಇದ್ದಿತು. ಶ್ರೀ ರಾಮಚಂದ್ರನಂತೆ ಏಕಪತ್ನಿವ್ರತಸ್ಥರಾಗಿದ್ದ ರಾಜರು ವಿರಳ. ಆದರೆ, ರಾಜರಂತೆ, ಅವರ ಪ್ರಜೆಗಳೂ ಬಹುಪತ್ನಿವ್ರತಸ್ಥರಾಗಿದ್ದರೇ ಎನ್ನುವುದು ಯಾವುದೇ ಇತಿಹಾಸದ ಪುಸ್ತಕದಲ್ಲಿಯೂ ತಿಳಿಸಿಲ್ಲದಿರುವುದರಿಂದ, ಅದರ ಕುರಿತಾಗಿ ಖಚಿತವಾಗಿ ಹೇಳುವಂತಿಲ್ಲ.
  ಎಷ್ಟು ಹೆಂಡತಿ ಅಥವಾ ಗಂಡಂದಿರನ್ನು ಮದುವೆಯಾಗಬಹುದೆಂದು ಮತ-ಧರ್ಮಗಳು ಏನೇ ಹೇಳಿರಲಿ, ಇಂದಿನ ನಮ್ಮ ಸಮಾಜಕ್ಕೆ ಅನುಕೂಲವಾಗಿ ನಡೆಯುವುದೇ ಜಾಣತನ.
  ಜನಸಂಖ್ಯಾಸ್ಫೋಟದ ಕಾಲದಲ್ಲಿ ಧರ್ಮದ ಅನುಸಾರವಾಗಿ ತಾನು ಬಹುಪತ್ನಿಯರನ್ನೇ ಹೊಂದುವುದಾಗಿ ಯಾರಾದರೂ ವಾದಿಸಿದರೆ ಅವರನ್ನು ಮೂರ್ಖರೆಂದೇ ಹೇಳಬೇಕು. ಬಹುಪತ್ನಿಯರನ್ನು ಹೊಂದಿದ ಮೇಲೆ ಬಹು ಪುತ್ರ/ಪುತ್ರಿಯರು ಬೇಡವೆನ್ನುವರೇ? ಅದರ ಕುರಿತಾಗಿಯೂ ಧರ್ಮದ ಮಾತನ್ನೇ ಕೇಳಬೇಕಲ್ಲ. ಹೀಗಾದರೆ, ಸಮಾಜವನ್ನು ಯಾವ ಭಗವಂತನೂ ಕಾಯಲಾರ.
  ಯಾವ ಸಮಾಜ/ಸಮುದಾಯ/ಗುಂಪುಗಳ ಜನಸಂಖ್ಯೆ ಯಾವ ಪ್ರಮಾಣದಲ್ಲಿ ಏರುತ್ತಿದೆ ಎನ್ನುವುದಕ್ಕೆ ಜನಸಂಖ್ಯಾ ವರದಿಯನ್ನು ಕಳೆದ ೧೦೦ ವರ್ಷಕ್ಕಿಂತಲೂ ಅಧಿಕ ಕಾಲದಿಂದ ಸರಕಾರ ನೀಡುತ್ತಾ ಬಂದಿದೆ. ಅದನ್ನು ನೋಡಿದಾಗ ಸತ್ಯವು ತಿಳಿದೀತು.
  ಒಟ್ಟಿನಲ್ಲಿ ಜನಸಂಖ್ಯಾಸ್ಫೋಟದ ಅಪಾಯವನ್ನು ಆದಷ್ಟು ಬೇಗ ಪ್ರತಿಯೊಂದು ಸಮಾಜ/ಸಮುದಾಯ/ಗುಂಪುಗಳೂ ಗುರುತಿಸಿದರೆ ಒಳ್ಳೆಯದು.

 2. ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಹೊಂದಿರುವ ಮಹಿಳೆಯವರು ಬಹುಪತ್ತಿತ್ವವನ್ನು ಒಪ್ಪಿದರೆ ಬಹುಪತ್ಸಿತ್ವ ತಪ್ಪೇನಲ್ಲ. ಮಹಿಳೆಯರ ಅಭಿಪ್ರಾಯವೇ ಇದಕ್ಕೆ ಅತಿ ಮುಖ್ಯ . ಅದೂ ಒಬ್ಬ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವತಂತ್ರಳಾದ ಮಹಿಳೆ ಇನ್ನೊಬ್ಬನ ಎರಡನೇ ಹೆಂಡತಿಯಾಗಿರಲು ಒಪ್ಪಿದಲ್ಲಿ ತಪ್ಪೇನಿಲ್ಲ.

 3. ವೆಬ್ ತಾಣವೊಂದರಿಂದ ತೆಗೆದುಕೊಂಡಿದ್ದಾಗಿ ಹೇಳಿದ್ದೀರ! ಆ ವೆಬ್ ತಾನದ ಹೆಸರನ್ನೇ ಕೊಟ್ಟಿಲ್ಲ! ಪರಾಮರ್ಶನ ಮೂಲದ ಹೆಸರನ್ನು ಕೊಡುವುದು ಒಳ್ಳೆಯದು. ಅದು ನನ್ನದೆಂಬ ಕಾರಣಕ್ಕಲ್ಲ; ಸತ್ಸಂಪ್ರದಾಯವೆಂಬ ಕಾರಣಕ್ಕೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s