ಜಪಾನ್ ದುರಂತ ಮತ್ತು ಹಾಸ್ಯ

ಜಪಾನ್ ದುರಂತದಿಂದ ದಿಗ್ಭ್ರಾಂತವಾದ ವಿಶ್ವ ಜಪಾನೀಯರಿಗೆ ತಮ್ಮ ಅನುಭೂತಿ, ಸಂತಾಪ, ಪ್ರಾರ್ಥನೆಗಳನ್ನು ಒಂದು ಕಡೆ ಅರ್ಪಿಸುತ್ತಿದ್ದರೆ  ಮತ್ತೊಂದು ಕಡೆ ಅಲ್ಲಿನ ಸಾವು ನೋವಿನ ಬಗ್ಗೆ ಯಾವ ನೋವೂ ಇಲ್ಲದೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಅಭಿರುಚಿಯ ಜೋಕುಗಳನ್ನು ಸಿಡಿಸುತ್ತಿದ್ದಾರೆ ಕೆಲವರು.

ಅಮೆರಿಕೆಯ ಚಿತ್ರ ಸಾಹಿತ್ಯ ಲೇಖಕನೊಬ್ಬ ಜಪಾನ್ ದುರಂತದ ಬಗ್ಗೆ ಟ್ವೀಟಿಸಿದ್ದು ಹೀಗೆ; “ಜಪಾನಿನ ಭೂಕಂಪನದ ಬಗ್ಗೆ ಒಳ್ಳೆಯ ಭಾವನೆ ಬರಬೇಕಾದರೆ ಪರ್ಲ್ ಹಾರ್ಬರ್ ಸಾವಿನ ಸಂಖ್ಯೆ ಬಗ್ಗೆ ಗೂಗ್ಲಿಸಿ ನೋಡಿ”

೧೯೪೧ ರಲ್ಲಿ ಜಪಾನೀ ನಾವಿಕ ಪಡೆ ಅಮೆರಿಕೆಯ ಹವಾಯಿ ದ್ವೀಪದ ಪರ್ಲ್ ಹಾರ್ಬರ್ ಮೇಲೆ ನಡೆಸಿದ ಅಚ್ಚರಿದಾಯಕ ಆಕ್ರಮಣದಲ್ಲಿ ೨೦೦೦ ಸಾವಿರಕ್ಕೂ ಹೆಚ್ಚು ಜನ ಸತಿದ್ದರು. ಅದಕ್ಕೂ ಹೆಚ್ಚಾಗಿ ಈ ಆಕ್ರಮಣ ಅಮೆರಿಕೆಯ ಸೇನಾ ಪ್ರತಿಷ್ಠೆಗೆ ಭಾರೀ ಪೆಟ್ಟನ್ನೂ ನೀಡಿತ್ತು. ಈ ಆಕ್ರಮಣವನ್ನು ಗಮನದಲ್ಲಿಟ್ಟು ಕೊಂಡು ಪ್ರಸಕ್ತ ನೈಸರ್ಗಿಕ ವಿಕೋಪ ಕಾರಣ ಜಪಾನಿನಲ್ಲಿ ಸಂಭವಿಸಿದ ಅಗಾಧ ಸಾವು ನೋವಿಗೆ ಈತನ ಮನಸ್ಸು ಪ್ರತಿಸ್ಪಂದಿಸಲು ವಿಫಲವಾಯಿತು. ರಾಜಕೀಯ ಕಾರಣಗಳಿಗಾಗಿ ನಡೆದ ಆಕ್ರಮಣಕ್ಕೆ ಸೇಡು ಎನ್ನುವಂತೆ ಟ್ವೀಟಿಸುವ ಈತನಿಗೆ ಸಂದು ಹೋದ ಚರಿತ್ರೆ ಬಗ್ಗೆ ಮರುಗುವುದು ಹುಂಬತನ ಎನ್ನುವುದು ತಿಳಿಯದೆ ಹೋಯಿತು. ಇಂದು ಜಪಾನಿನ ಮೇಲೆ ಎರಗಿದ ನಿಸರ್ಗ ನಾಳೆ ತನ್ನ ದೇಶದ ಮೇಲೂ ಎರಗಬಾರದು ಎನ್ನುವ ಖಾತರಿ ಇಲ್ಲ ಎನ್ನ್ವುಉದು ಈ ಸಾಹಿತಿಗೆ ಅರಿಯದೆ ಹೋಯಿತು.   

ಮೇಲೆ ಹೇಳಿದ ಚಿತ್ರಸಾಹಿತಿಯ ಟ್ವೀಟ್ ಬಗ್ಗೆ ಗುಲ್ಲೆದ್ದು, ಪ್ರತಿಭಟನೆ ಬಂದಾಗ ಅವನು ಹೇಳಿದ್ದು, ನಾನು ಟ್ವೀಟಿ ಸುವಾಗ ೨೦೦ ಜನ ಮಾತ್ರ ಸತ್ತಿದ್ದರು, ಈಗ ೧೦ ಸಾವಿರಕ್ಕೆ ಮುಟ್ಟಿದೆ ಸಾವಿನ ಸಂಖ್ಯೆ, ನನ್ನ ಸಂವೇದನಾ ರಹಿತ ಕಾಮೆಂಟ್ ಗಳಿಗೆ ಕ್ಷಮೆಯಿರಲಿ”. ೨೦೦ ಜನ ಸತ್ತರೆ ಈತನಿಗೆ ದೊಡ್ಡ ವಿಷಯವಲ್ಲ. ಅದು ಗಂಭೀರವೂ ಅಲ್ಲ. ಅಮೆರಿಕೆಯ ದಿವಂಗತ ಸೆನಟರ್ ಟೆಡ್ ಕೆನಡಿಯ ಸಾಕು ನಾಯಿ “ಸ್ಪ್ಲಾಶ್” ಇತ್ತೀಚೆಗೆ ಸತ್ತಾಗ ಅದು ದೊಡ್ಡ ಸುದ್ದಿ. ಭೂಕಂಪದಲ್ಲಿ ಸತ್ತ ಜನರಿಗೆ ತಮಾಷೆಯ ಟ್ವೀಟ್. ಇದು ಸಂಸ್ಕಾರ.

ಈಗ ಮತ್ತೊಬ್ಬ ಹಾಸ್ಯನಟನ ಹಾಸ್ಯದ ಟ್ವೀಟ್ ನೋಡಿ; “ಜಪಾನೀಯರು ತುಂಬಾ ಮುಂದುವರಿದವರು, ಅವರು ಸಮುದ್ರ ತೀರಕ್ಕೆ ಹೋಗುವುದಿಲ್ಲ, ಬದಲಿಗೆ ತೀರವೇ ಅವರಿದ್ದಲ್ಲಿಗೆ ಬರುತ್ತದೆ”. ದೈತ್ಯಾಕಾರದ ಸುನಾಮಿ ಅಲೆಗಳು ೨೦೦ ರಿಂದ ೫೦೦ ಕಿಲೋ ಮೀಟರ್ ವೇಗದಲ್ಲಿ ಸೆನ್ಡಾಯ್ ನಗರದ ಮೇಲೆ ಅಪ್ಪಳಿಸಿ ಹತ್ತಾರು ಸಾವಿರ ಜನ ಸತ್ತಾಗ ಬಂದ ಶೋಕತಪ್ತ ಟ್ವೀಟ್ ಇದು. ಇದು ಬಿಳಿಯರಿಗೆ ಹಾಸ್ಯ. ಅಭಿವ್ಯಕ್ತಿ ಸ್ವಾಂತ್ರ್ಯ. ಬಿಳಿಯರಲ್ಲದ ಜನರ ಮೇಲೆ ಅವರಿಗಿರುವ ಅನುತಾಪ ಅಷ್ಟಕ್ಕಷ್ಟೇ. ಜಪಾನೀಯರನ್ನೂ, ಚೀನೀಯರನ್ನೂ ಹಳದಿ ಚರ್ಮದವರು ಎಂದು ತಮಾಷೆ ಮಾಡುತ್ತಾರಂತೆ ಪಾಶ್ಚಾತ್ಯರು.

ಆಧುನಿಕ ಬದುಕಿನ blackberry ಸಂಸ್ಕೃತಿ ಕಾರಣ ಮನುಷ್ಯ ಮತ್ತೊಬ್ಬರ ಕಷ್ಟಗಳಿಗೆ ಸ್ಪಂದಿಸಲು, ಅನುಕಂಪ ತೋರಲು ಸೋಲುತ್ತಿದ್ದಾನೆ ಎಂದರೆ ಉತ್ಪ್ರೇಕ್ಷೆ ಆಗಬಹುದೇ?       

ಭೂತ ಕಾಲದ ಬಗ್ಗೆ ತಲೆ ಕೆಡಿಸಿಕೊಳ್ಳುವವರಿಗೆ ಒಬ್ಬ ಮಹನೀಯ ಹೇಳಿದ್ದು;

the past is a foreign country; they do things differently there

Advertisements

2 thoughts on “ಜಪಾನ್ ದುರಂತ ಮತ್ತು ಹಾಸ್ಯ

  1. Ravi ಹೇಳುತ್ತಾರೆ:

    ಕೀಳು ಮಟ್ಟದ ನಡವಳಿಕೆ. ಪರ್ಲ್ ಹಾರ್ಬರ್ ನಂತರ ಅಮೆರಿಕ ಜಪಾನ್ ಮೇಲೆ ಏನು ಮಾಡಿತು? ಅದರ ಬಗ್ಗೆ ಯಾವುದಾದರೂ ಟ್ವೀಟ‍ುಗಳಿವೆಯೇ? ಸಂದ ಚರಿತ್ರೆಯ ಬಗ್ಗೆ ಮರುಗುವುದಲ್ಲ ಅದು ಮರುಕಳಿಸದಂತೆ ಎಚ್ಚರವಹಿಸಬೇಕು. ಭೂತ ಕಾಲದ ಬಗ್ಗೆ ಸ್ವಲ್ಪ ತಲೆಕೆಡಿಸಿಕೊಳ್ಳಲೇ ಬೇಕು 🙂 ಇಲ್ಲವಾದರೆ ಜಪಾನ್ ಇಷ್ಟು ಮೇಲೆ ಬರುತ್ತಿರಲಿಲ್ಲ. ಪ್ರಾಕೃತಿಕ ಆಕ್ರಮಣಕ್ಕೆ ಏನೂ ಮಾಡಲಾಗದು, ಆದರೆ ಮಾನುಷ ಆಕ್ರಮಣಕ್ಕೆ ತಡೆಯಬಹುದು. ನಿಜವೆಂದರೆ ಸುನಾಮಿಯಂಥ ಅಮಾನುಷ ಆಕ್ರಮಣಕ್ಕೂ ಅವರು ಸಿದ್ಧತೆ ನಡೆಸಿದ್ದರು. ಆದರೆ ಈ ಸಲ ಪ್ರಕೃತಿ ಮೇರೆ ಮೀರಿ ಬಂತು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s