ಎಲ್ಲರನ್ನೂ ಆದರಿಸೋಣ, ಎಲ್ಲವನ್ನೂ ಗೌರವಿಸೋಣ

ಹಿಂದೂ ದೇವರುಗಳ ಬಗ್ಗೆ ಅಸಹ್ಯವಾಗಿ, ಚಿತ್ರಿಸುವ ಚಾಳಿ ಕುರಿತು ಕನ್ನಡದ ಖ್ಯಾತ ಆನ್ ಲೈನ್ ತಾಣದಲ್ಲಿ ಒಬ್ಬರು ಖೇದ, ಆಕ್ರೋಶ ವ್ಯಕ್ತಪಡಿಸಿದ್ದರು. ಕಲೆಯ ಹೆಸರಿನಲ್ಲಿ, ಸೃಜನಶೀಲತೆಯ ಹೆಸರಿನಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಧಾರ್ಮಿಕ ಭಾವನೆಗಳನ್ನ ಕೆರಳಿಸುವುದು, ನಮ್ಬಿಕೆಗಳನ್ನು ಘಾಸಿಗೊಳಿಸುವುದು ತರವಲ್ಲ. ಸೃಜನಶೀಲತೆ ಅಥವಾ ಬೇರಾವುದಾದರೂ ಪ್ರತಿಭೆಯನ್ನು ಸಾಕಾರಗೊಳಿಸಲು ಹತ್ತು ಹಲವು ಮಾರ್ಗಗಳಿವೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕಲೆ ಕುಚೋದ್ಯದಿಂದ ಕೂಡಿದ್ದು. ಈ ಕುಚೋದ್ಯ ಇಸ್ಲಾಮ್ ಧರ್ಮದ ಮೇಲೆ ಪ್ರಯೋಗವಾದಷ್ಟು ಬೇರಾವ ಧರ್ಮದ ಮೇಲೂ ಆಗಿರಲಾರದು. ಅಂಥ ಕಲೆಯನ್ನು ಮುಸ್ಲಿಮರು ಖಂಡಿಸಿದಾಗ ಅವರನ್ನು ಬೆಂಬಲಿಸಲು ಯಾರೂ ಇರಲಿಲ್ಲ. ಬದಲಿಗೆ ಮುಸ್ಲಿಮರಿಗೆ ಸಿಕ್ಕಿದ್ದು ಕಲೆಯ ಬಗ್ಗೆ, ಸೃಜನಶೀಲತೆಯ ಬಗ್ಗೆ, ಆಧುನಿಕ ಬದುಕಿನ ಬಗ್ಗೆ ಪಾಠ. ಚಿಕ್ಕತನವನ್ನು ಬಿಟ್ಟು ನೀವು ಬೆಳೆಯಬೇಕು ಎನ್ನುವ ಕಿವಿಮಾತು. ಈಗ ಅದೇ ಪಿಶಾಚಿ ತಮ್ಮ ಹೊಸ್ತಿಲಿಗೆ ಬಂದು ನಿಂತಾಗ ಜನ ಹೌಹಾರುತ್ತಿದ್ದಾರೆ. reactions strangely different.

೨೦೦೩ ರಲ್ಲಿ ಡ್ಯಾನಿಶ್ ವ್ಯಂಗ್ಯಚಿತ್ರಕಾರ “ಕ್ರಿಸ್ಟಫರ್ ಜೈಲರ್” ಯೇಸು ಕ್ರಿಸ್ತರ ಬಗೆಗಿನ ಕೆಲವು ಚಿತ್ರಗಳನ್ನ ಅಲ್ಲಿನ ಖ್ಯಾತ ಪತ್ರಿಕೆ Jyllands-Posten ಗೆ ಕಳಿಸಿದ. ಸಂಪಾದಕ ಈತನಿಗೆ ‘ಈ ಮೇಲ್’ ಕಳಿಸಿ ಈ ಚಿತ್ರಗಳನ್ನು ಕ್ರೈಸ್ತರು ನೋಡಿ ಆನಂದಿಸಲಿಕ್ಕಿಲ್ಲ ಮತ್ತು ಕ್ರೈಸ್ತರ ಭಾವನೆಗಳಿಗೆ ನೋವುಂಟು ಮಾಡುವುದರಿಂದ ಅದನ್ನು ಪ್ರಕಟಿಸಲು ಸಾಧ್ಯವಿಲ್ಲ ಎಂದು ವಿವರಿಸಿದ. ಇದೇ ಪತ್ರಿಕೆ ೨೦೦೫ ರಲ್ಲಿ ಪ್ರವಾದಿ ಮುಹಮ್ಮದರ ಕಾರ್ಟೂನ್ ಗಳನ್ನು ಪ್ರದರ್ಶಿಸಿ ತನ್ನ ಕೊಳಕು ‘ಡಬಲ್ ಸ್ಟ್ಯಾಂಡರ್ಡ್’ ಅನ್ನು ಸೊಗಸಾಗಿ ಪ್ರದರ್ಶಿಸಿತು.

ಧಾರ್ಮಿಕ ಕುರುಹುಗಳನ್ನು ನಮಗೆ ಬೇಕಾದ ಸ್ಥಳಗಳಲ್ಲಿ, ಬೇಕಾದ ರೀತಿಯಲ್ಲಿ ಬಳಸಿ ಕೊಂಡಾಗ ಅದರ ಬಗ್ಗೆ ಗೌರವ, ಭಕ್ತಿ ತಂತಾನೇ ಕಡಿಮೆಯಾಗುತ್ತದೆ. ಧರ್ಮ ವೈಯಕ್ತಿಕವಾಗಿರಬೇಕು. ಧಾರ್ಮಿಕ ಭಾವನೆ ಮನಸ್ಸಿನಲ್ಲಿ ನೆಲೆಯೂರಿರಬೇಕು. we should not wear our faiths on our sleeves. ಗಣೇಶನ ಮೂರ್ತಿಗಳನ್ನು ತೋಚಿದ ರೀತಿಯಲ್ಲಿ, ಬ್ಯಾಟ್ ಹಿಡಿದು ಕೊಂಡೂ ಮತ್ಯಾವುದಾದರೂ ರೀತಿಯಲ್ಲಿ ರೂಪಿಸಿದಾಗ ನಾವು ನೀಡುತ್ತಿರುವ ಸಂದೇಶವಾದರೂ ಏನು? ಈ ರೀತಿ ದೇವರ ಚಿತ್ರಗಳನ್ನು, ಇನ್ನಿತರ ಧಾರ್ಮಿಕ ಸಂಕೇತಗಳನ್ನು ಸಾರಾಸಗಟಾಗಿ ಕಲೆಯ ಹೆಸರಿನಲ್ಲಿ ದುರುಪಯೋಗ ಮಾಡಿಕೊಂಡಾಗ ಯಾವುದು ಸರಿ ಯಾವುದು ತಪ್ಪು ಎನ್ನುವ ವಿಂಗಡಿಸುವ ರೇಖೆ ಮಸುಕಾಗಿ ಬಿಡುತ್ತದೆ. ಆಗ ಸಮಸ್ಯೆಗಳು ಎದುರಾಗಲು ತೊಡಗುತ್ತವೆ.

ಮುಸ್ಲಿಮರಲ್ಲಿ ಯಾವುದೇ ಕೆಲಸ ಆರಂಭಿಸುವಾಗಲೂ ಕರುಣಾಮಯನೂ, ದಯಾಮಯನೂ ಆದ ಅಲ್ಲಾಹನ ನಾಮದಿಂದ (ಬಿಸ್ಮಿಲ್ಲಾ ಅರ್ರಹ್ಮಾನ್, ಅರ್ರಹೀಂ) ಎನ್ನುವ ಕುರಾನ್ ಸೂಕ್ತ ಉಪಯೋಗಿಸುತ್ತಾರೆ. ಈ ಸೂಕ್ತವನ್ನು ಕೆಲವರು ಪತ್ರ ಬರೆಯುವಾಗಲೂ ಇನ್ನಿತರ ಸ್ಥಳಗಳಲ್ಲೂ ಬಳಸುವುದನ್ನು ನೋಡಿದ ಧರ್ಮ ಗುರುಗಳು ಆಕ್ಷೇಪ ಮಾಡಿ ನಾವು ಬರೆದ ಕಾಗದ ಅದರ ಉಪಯೋಗ ಮುಗಿದ ನಂತರ ತಿಪ್ಪೆ ಸೇರುವುದರಿಂದ ಅಂಥ ಸ್ಥಳಗಳಲ್ಲಿ ಈ ಸೂಕ್ತ ಉಪಯೋಗಿಸಕೂಡದು ಎಂದು ನಿರ್ದೇಶಿಸಿದ್ದರು. ಹಾಗೆಯೇ ಕೊರಳಿಗೆ ಹಾಕಿ ಕೊಳ್ಳುವ ಸರದ ಲಾಕೆಟ್ ಗಳ ಮೇಲೆ ‘ಅಲ್ಲಾಹ್’ ಎಂದು ಬರೆಯುವುದನ್ನು ಬಹಳ ಜನ ಒಪ್ಪುವುದಿಲ್ಲ. ಏಕೆಂದರೆ ನಮ್ಮೊಂದಿಗೆ ಸರವೂ ಶೌಚ ಗೃಹ ಪ್ರವೇಶ ಮಾಡುವುದರಿಂದ ಅಲ್ಲಾಹನ ಹೆಸರಿನ ಪಾವಿತ್ರ್ಯಕ್ಕೆ ಧಕ್ಕೆ ಆಗಬಹುದು ಎಂದು ಬಗೆದು. ಇದು ಧಾರ್ಮಿಕ ಕುರುಹುಗಳನ್ನು ಕಾಪಾಡುವ ರೀತಿ.

ನಮ್ಮ ಧರ್ಮ ವೈಯಕ್ತಿಕ. ನಮ್ಮ ವೈಯಕ್ತಿಕ ವಿಷಯಗಳಲ್ಲಿ ಕೈ ಹಾಕಲು ಯಾರಿಗೂ ನಾವು ಅನುಮತಿಸುವುದಿಲ್ಲ. ಧರ್ಮಕ್ಕೂ ಅದೇ ನಿಲುವು ಅನ್ವಯವಾಗಲಿ. ಯಾರೂ ಯಾರ ಭಾವನೆಗಳನ್ನೂ ಘಾಸಿಗೊಳಿಸಲು ಹೋಗಬಾರದು. ಎಲ್ಲ ಧರ್ಮಗಳನ್ನೂ ಗೌರವಿಸುತ್ತಾ, ಆದರಿಸುತ್ತಾ ನಡೆದರೆ ಯಾವ ರೀತಿಯ ಸಮಸ್ಯೆಗಳೂ ಎದುರಾಗವು.

Advertisements

2 thoughts on “ಎಲ್ಲರನ್ನೂ ಆದರಿಸೋಣ, ಎಲ್ಲವನ್ನೂ ಗೌರವಿಸೋಣ

  1. ರವಿ ಹೇಳುತ್ತಾರೆ:

    ಎಂ ಎಫ್ ಎಚ್ ಮಾಡಿದ ಕೆಲಸವನ್ನು ಮುಸ್ಲಿಮರೂ ಖಂಡಿತ ಸಮರ್ಥಿಸಲಾರರು, ಕಮ್ಯುನಿಸ್ಟರನ್ನು ಹೊರತುಪಡಿಸಿ. ಅಲ್ಲಿ ನಾಸ್ತಿಕತೆ, ಕಮ್ಯುನಿಸಂ ನ ಕುಮ್ಮಕ್ಕು ಇದ್ದಿರುವಂತೆ ಕಾಣುತ್ತದೆ. ಧಾರ್ಮಿಕ ಸಂಕುಚಿತತೆ ಬಗ್ಗೆ ಪಾಠ ಹೇಳುವವರೂ ಬಹುತೇಕ ಇವರೇ.
    ಗಣೇಶ ಹಬ್ಬ ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಕಿಚ್ಚು ಹೊತ್ತಿಸಿದ ಹಬ್ಬ. ಸ್ವಾತಂತ್ರ್ಯ ಹೋರಾಟಕ್ಕೋಸ್ಕರ ಎಲ್ಲ ಧರ್ಮದವರೂ ಹಬ್ಬದ ನೆವದಲ್ಲಿ ಒಟ್ಟು ಸೇರುವಂತೆ ಮಾಡಿತು. ಗಣೇಶ ಒಂಥರಾ ಧರ್ಮಾತೀತ. ಗಣೇಶನ ಬೇರೆ ಬೇರೆ ಅವತಾರಗಳು ಸರಿಯೋ ತಪ್ಪೋ ಆದರೆ ಅದನ್ನು ಎಲ್ಲರೂ ಖುಷಿ ಪಡುತ್ತಾರೆ. ಧಾರ್ಮಿಕ ಭಾವನೆಗೆ ಯಾರೂ ಘಾಸಿ ಮಾಡದಿದ್ದರೆ ಆಯಿತು. ಗಣೇಶನಿಗೆ ಮಡಿ ಮೈಲಿಗೆಯೂ ಇಲ್ಲ. ಪುರೋಹಿತರಿಂದಲೂ ಪೂಜೆಗೊಳ್ಳುತ್ತಾನೆ. ಹಫ್ತಾ (ಕಾಣಿಕೆ ಹೆಸರಿನಲ್ಲಿ) ವಸೂಲಿ ಮಾಡುವ ಪುಂಡರಿಂದಲೂ ಪೂಜೆಗೊಳ್ಳುತ್ತಾನೆ. ಎರಡನೆಯದು ಖಂಡಿತ ಸರಿ ಅಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದು ಯಾವ ಧರ್ಮ ದೇವರುಗಳೂ ಹೇಳುವುದಿಲ್ಲ. ದುರದೃಷ್ಟ, ಇದರ ವಿರುದ್ಧ ಗಟ್ಟಿ ದನಿ ಇನ್ನೂ ಬಂದಿಲ್ಲ. ಆದರೆ ಗಣೇಶನ ಅವತಾರಗಳನ್ನ ನೋಡಿ ಎಂ ಎಫ್ ಕೆಲಸಗಳನ್ನು ಸಮರ್ಥಿಸಲು ಸಾಧ್ಯವಿಲ್ಲ.

    “ಎಲ್ಲರನ್ನೂ ಆದರಿಸೋಣ, ಎಲ್ಲವನ್ನೂ ಗೌರವಿಸೋಣ”- ಮುತ್ತಿನಂಥ ಮಾತು. ಎಲ್ಲರಿಗೂ ಗೊತ್ತಿರುವಂಥ, ಆದರೂ ಆಗಾಗ ನಾವೆಲ್ಲರೂ ಮರೆಯುವಂಥ ಮಾತು. ಸರಿ, ಈಗ ಬ್ಯಾಕ್ ಟು ಬೇಸಿಕ್ಸ್ – ದಯೆಯೇ ಧರ್ಮದ ಮೂಲವಯ್ಯ…ಎಲ್ಲ ಧರ್ಮಗಳ ಸಾರ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s